ಇತ್ತೀಚಿನ ಸುದ್ದಿ
ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ನೇಮೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭಾಗಿ: ಪ್ರಸಾದ ಸ್ವೀಕಾರ
06/04/2024, 15:14
ಪುತ್ತೂರು(reporterkarnataka.com): ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು.
ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ್ ರೈ ಶಾಲು ಹೊದಿಸಿ ಗೌರವಿಸಿದರು.
ಪ್ರಮುಖರಾದ ಜಯಂತ್ ನಡುಬೈಲು, ಶ್ರೀ ಪ್ರಸಾದ್ ಪಾಣಾಜೆ, ಜಯಂತ್ ಕೆಂಗುಡೇಲು ಮೊದಲಾದವರು ಉಪಸ್ಥಿತರಿದ್ದರು.