ಇತ್ತೀಚಿನ ಸುದ್ದಿ
ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ರಾಜಕೀಯ ನಿವೃತ್ತಿ
08/04/2024, 17:37
>strong>ಚಿಕ್ಕಬಳ್ಳಾಪುರ(reporterkarnataka.com): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಅವರು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿಯೂ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿತ್ತು. ಇದೀಗ ಮೊಯ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಅವಿಭಜಿತ ದ.ಕ. ಜಿಲ್ಲೆಯಿಂದ ಆಯ್ಕೆಗೊಂಡ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೀರಪ್ಪ ಮೊಯ್ಲಿ ಅವರು ಕಾರ್ಕಳ ಕ್ಷೇತ್ರದಿಂದ ಚುನಾವಣಾ ರಾಜಕೀಯ ಆರಂಭಿಸಿದ್ದರು. ಸತತವಾಗಿ ಗೆಲುವು ಕಂಡಿದ್ದ ಅವರು ಕಾರ್ಕಳ ಕ್ಷೇತ್ರವನ್ನು ತನ್ನ ಶಿಷ್ಯ ಗೋಪಾಲ ಭಂಡಾರಿ ಅವರಿಗೆ ಸ್ಪರ್ಧಿಸಲು ಬಿಟ್ಟುಕೊಟ್ಟಿದ್ದರು. ದೇವರಾಜ ಅರಸ್ ಹಾಗೂ ಆರ್. ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿದ್ದರು. ನಂತರ ಮುಖ್ಯಮಂತ್ರಿಯಾದರು. ಡಾ.ಮನಮೋಹನ್ ಸಿಂಗ್ ಸಂಪುಟದಲ್ಲಿ ಪೆಟ್ರೋಲಿಯಂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.