8:42 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲ್ಲೇ ಕಾಡಾನೆ ಸಂಚಾರ: ಸ್ವಲ್ಪದರಲ್ಲೇ ಬೈಕ್ ಸವಾರ ಪಾರು; ನೀರಿಗಾಗಿ ಪರದಾಟ ಶಂಕೆ

08/04/2024, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪಕರ್ಕಿಸುವ ಚಾರ್ಮಾಡಿ ಘಾಟಿಯ 9ನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ.
ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ.
-ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ-
ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರು ಅದನ್ನು ತಿಳಿಯದ ಆತ ಸಂಚಾರ ನಡೆಸಿದ್ದಾನೆ. ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶನಿವಾರ ರಾತ್ರಿ ಕಾಡಾನೆ ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗೂ ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನೊಳಗೆ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.
ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಒಣಗಿದ್ದು ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ, ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು