8:39 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ?

09/04/2024, 21:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.


ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಅಣ್ಣಪ್ಪ ನಿಂಬಾಳ ಅವರ ಕೊಲೆ ನಡೆದಿತ್ತು. ತನಿಖೆ ಚುರುಕುಗೊಳಿಸಿದ ಖಾಕಿ ಪಡೆ
ನೆರೆಯ ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30) ಶಿರೂರ ಗ್ರಾಮದ ಶಿವಾಜಿ ಲಹು ಹಜಾರೆ (26) ಸುಖದೇವ  ರಘುನಾಥ ಹಜಾರೆ (26) ಸಂತೋಷ ಅವಜಿ ಹೋನಮೋರೆ (24) ಎಂಬವರನ್ನು ಬಂಧಿಸಿದ್ದಾರೆ.
ಕೇವಲ 20 ಗುಂಟೆ ಜಮೀನಿಗಾಗಿ ಪ್ರಭಾವಿ ಕಾಂಗ್ರೆಸ್ ಮುಖಂಡನ ಹತ್ಯೆ ಆಯ್ತಾ ಅನ್ನೋ ಅನುಮಾನ ಕಾಡುತ್ತಿದೆ. ಮಾಜಿ ಡಿಸಿಎಂ ಸವದಿ ಆಪ್ತ ಅಣ್ಣಪ್ಪ ನಿಂಬಾಳ ಭೀಕರ ಹತ್ಯೆಯಿಂದ ಗ್ರಾಮದಲ್ಲಿ ಸ್ಮಶಾನ ಮೌನ ಅವರಿಸಿದ್ದು  ಕೊಲೆಯ ಹಿಂದಿನ ಅಸಲಿ ಸತ್ಯ ತಿಳಿಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು