6:09 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ. ಜಿಲ್ಲೆ ಪ್ರಥಮ, ಗದಗ ಲಾಸ್ಟ್; ಈ ಬಾರಿಯೂ ಹುಡುಗಿಯರು ಮೇಲುಗೈ

10/04/2024, 11:21

ಬೆಂಗಳೂರು(reporterkarnataka.com): ರಾಜ್ಯಮಟ್ಟದಲ್ಲಿ ನಡೆದ 2023-24ನೇ ಸಾಲಿನ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ.
ಪರೀಕ್ಷೆಯಲ್ಲಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಮಾಮೂಲಿಯಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಗಳಿಸಿದೆ. ಹಾಗೆ ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು