ಇತ್ತೀಚಿನ ಸುದ್ದಿ
ಯಾವುದೇ ಸಂಘಟನೆಗೆ ನಿಜವಾದ ಬದ್ಧತೆ, ಗುರಿ ಮುಖ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ
10/04/2024, 11:28
ಮಂಗಳೂರು(reporterkarnataka.com): ಎನ್‌ಎಸ್‌ಯುಐ ಇರಲಿ ಅಥವಾ ಯಾವುದೇ ಸಂಘಟನೆಗಳಿರಲಿ ಅದಕ್ಕೆ ನಿಜವಾದ ಬದ್ಧತೆ, ಗುರಿ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಎನ್ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ, ನೀರಜ್‌ಪಾಲ್, ನಾಸೀರ್ ಮೊಂಟೆಪಡವು, ನಜೀಬ್ ಮಂಚಿ, ಶಶಿಲ್ ಎ.ಕೆ, ಶಾನ್, ಒಕ್ಕೂಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.