8:40 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಗೆಲುವಿನ ಅಂತರ ಹೆಚ್ಚುವುದು ನಮ್ಮ ಮುಂದಿರುವ ಗುರಿ: `ನಾರಿಶಕ್ತಿ’ ಸಮಾವೇಶದಲ್ಲಿ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್

10/04/2024, 15:13

ಗುರುಪುರ(reporterkarnataka.com): ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು ಸಾಬೀತಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ, ಬಿಜೆಪಿ ವಕ್ತಾರೆ, ನಟಿ ಮಾಳವಿಕಾ ಅವಿನಾಶ್ ಹೇಳಿದರು.


ಗುರುಪುರ ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಆಯೋಜಿಸಿದ `ನಾರಿಶಕ್ತಿ’ ಸಮಾವೇಶದಲ್ಲಿ ಅವರು ಮಾತನಾಡಿದರು.
ಪ್ರಧಾನಿ ಮೋದಿಯವರ ಆಸೆಯೂ ಇದೆ ಆಗಿದೆ. ಅದಕ್ಕೆಂದೇ ಅವರು ಪ್ರಧಾನಿಯಾದ ಬಳಿಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಯೋಜನೆಗಳನ್ನು ರೂಪಿಸಿದ್ದಾರೆ. ಈ ಚುನಾವಣೆಯಲ್ಲಿ ಮಹಿಳೆಯರು ಮೋದಿಯವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಮೋದಿಯವರ ಜನಪರ ಯೋಜನೆಗಳ ಎದುರು ಕಾಂಗ್ರೆಸ್ ಗ್ಯಾರಂಟಿ ಏನೂ ಅಲ್ಲ. ಸ್ವಚ್ಛ ಭಾರತದ ಶೌಚಾಲಯ, ಉಜ್ವಲ ಗ್ಯಾಸ್, ಜಲಜೀವನ್ ಮಿಷನ್, ಆಯುಷ್ಮಾನ್, ಮಾತೃ ವಂದನಾ ಮತ್ತಿತರ ಯೋಜನೆಗಳಿಗೆ ಕಾಂಗ್ರೆಸ್ ಗ್ಯಾರಂಟಿ ಹೋಲಿಕೆಯೇ ಅಲ್ಲ ಎಂದು ಅವರು ಹೇಳಿದರು.
ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳಾ ರಾವ್ ಮಾತನಾಡಿ, ನಾರಿಶಕ್ತಿಗೆ ಪ್ರಧಾನಿ ಮೋದಿ ಪ್ರಾಮುಖ್ಯತೆ ನೀಡಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಅವರನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸಿ ಸಂಸತ್ತಿಗೆ ಕಳುಹಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಮಾತನಾಡಿ, ಪ್ರಧಾನಮಂತ್ರಿಯವರ ಸಂಕಲ್ಪ ಈಡೇರಿಸಲು ಈ ಜಿಲ್ಲೆಯಿಂದ ಅವರ ಕಷ್ಟಗಳಿಗೆ ಸ್ಪಂದಿಸುವುದು ಕಷ್ಟವೇನಲ್ಲ. ಜಿಲ್ಲೆಯನ್ನು ಹಿಂದೂತ್ವದ ಭದ್ರಕೋಟೆಯನ್ನಾಗಿ ಉಳಿಸುವ ಕೆಲಸ ಮಾಡುವೆ. ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುವೆ ಎಂದು ನುಡಿದರು.
ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಪ್ರಧಾನಿ ಮೋದಿಯವರು ಎ. 14ಕ್ಕೆ ಮಂಗಳೂರಿಗೆ ಬರಲಿದ್ದು, ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಅಂದು ಜಿಲ್ಲೆಯ ಪ್ರತಿ ಬೂತ್‌ನಿಂದ ಕನಿಷ್ಠ 2ರಂತೆ 450ಕ್ಕೂ ಮಿಕ್ಕ ಬಸ್ಸುಗಳಲ್ಲಿ ಗೋಲ್ಡ್ ಪಿಂಚ್ ಮೈದಾನಕ್ಕೆ ಕಾರ್ಯಕರ್ತರು ಆಗಮಿಸಲಿದ್ದಾರೆ. ಆ ಸಂದರ್ಭದಲ್ಲಿ ಮಹಿಳೆಯರು ಮುಂಚೂಣಿಯಲ್ಲಿರಬೇಕು. ಚುನಾವಣೆಯಂದು ದೊಡ್ಡ ಮಟ್ಟದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ನಿಮ್ಮ ಶಕ್ತಿ ಎ. 26ರಂದು ಪ್ರದರ್ಶನಗೊಳ್ಳಬೇಕು ಎಂದರು.
ಮಂಗಳೂರು ಉತ್ತರ ಮಂಡಲದ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಪಕ್ಷ ಪ್ರಮುಖರಾದ ರೂಪಾ ಡಿ. ಬಂಗೇರ, ಶಾಂತಿ ಪ್ರಸಾದ್ ಹೆಗ್ಡೆ, ಉಪಮೇಯರ್ ಸುನೀತಾ, ತಿಲಕ್‌ರಾಜ್ ಕೃಷ್ಣಾಪುರ, ಬಬಿತಾ ರವೀಂದ್ರ, ಲೋಹಿತ್ ಅಮೀನ್, ಸಂದೀಪ್ ಪಚ್ಚನಾಡಿ, ರಣದೀಪ್ ಕಾಂಚನ್, ವಜ್ರಾಕ್ಷಿ ಶೆಟ್ಟಿ , ಪವಿತ್ರ ನಿರಂಜನ್ ಹಾಗೂ ಸ್ವಪ್ನ,ಸುಮಾ ಶೆಟ್ಟಿ ಸ್ಥಳೀಯ ಮುಖಂಡರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ರೇಖಾ ರಾಜೇಶ್ ಸ್ವಾಗತಿಸಿದರೆ, ಮೋರ್ಚಾದ ಉಪಾಧ್ಯಕ್ಷೆ ನಯನಾ ಕೋಟ್ಯಾನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು