ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಸಚಿವ ಅಂಗಾರರಿಂದ ಧ್ವಜಾರೋಹಣ
15/08/2021, 10:19

ಚಿತ್ರ:ಅನುಷ್ ಪಂಡಿತ್
ಮಂಗಳೂರು (Reporterkarnataka.com) ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಸ್ವಾತಂತ್ರ್ಯತೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್, ಮೇಯರ್ ಪ್ರೇಮಾನಂದ ಶೆಟ್ಟಿ, ಕರ್ನಾಟಕ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ದಿ. ಮೈಸೂರು ಎಲೆಕ್ಟಿçಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ರಾಜ್ಯ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ನಿತೀನ್ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಐಜಿಪಿ ದೇವಜ್ಯೋತಿ ರೇ, ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಗಣ್ಯರು, ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.