1:15 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ

11/04/2024, 21:32

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
205 ಬಂಟ್ವಾಳ ಕ್ಷೇತ್ರ-ಮಾಜಿ ಮೇಯರ್ ಶಶಿಧರ್ ಹೆಗ್ಡೆ, 201 ಮೂಡಬಿದ್ರೆ ಕ್ಷೇತ್ರ – ಮಾಜಿ ಮೇಯರ್ ಮಹಾಬಲ ಮಾರ್ಲ, ಕಾರ್ಪೊರೇಟರ್ ಅನಿಲ್ ಕುಮಾರ್, 207 ಸುಳ್ಯ ಕ್ಷೇತ್ರ – ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, 202 ಮಂಗಳೂರು ಉತ್ತರ ಕ್ಷೇತ್ರ – ಕಾರ್ಪೊರೇಟರ್ ಅಬ್ದುಲ್ ರವೂಫ್, 203 ಮಂಗಳೂರು ದಕ್ಷಿಣ ಕ್ಷೇತ್ರ- ಸಂತೋಷ್ ಕುಮಾರ್ ಶೆಟ್ಟಿ, ಲಾರೆನ್ಸ್ ಡಿಸೋಜ, 200 ಬೆಳ್ತಂಗಡಿ ಕ್ಷೇತ್ರ – ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, 204 ಮಂಗಳೂರು ಕ್ಷೇತ್ರ – ಕೆಪಿಸಿಸಿ ಸದಸ್ಯೆ ಎಸ್.ಅಪ್ಪಿ, ಕಾರ್ಪೊರೇಟರ್ ಅಶ್ರಫ್ ಬಜಾಲ್, 206 ಪುತ್ತೂರು-ಆರ್.ಜಿ.ಪಿ.ಆರ್.ಎಸ್ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು, ಅಲ್ತಾಫ್ ಮೊಹಮ್ಮದ್ ಅವರು ನೇಮಕಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು