8:45 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

11/04/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ.


ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ. ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆನೆ ಕಾರ್ಯಪಡೆಯ ಬಸವರಾಜ್ ಮಾತನಾಡಿ’ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು.ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಕಾಡಾನೆ ಸ್ಥಳಕ್ಕೆ ಒತ್ತಾಯ:* ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ.ಪರಿಹಾರ ನೀಡುವುದರ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು