7:54 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ

12/04/2024, 15:13

ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು.
ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ – ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಯಿತು.
ರೋಡ್ ಶೋಗೆ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿತು. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು