2:24 PM Monday24 - February 2025
ಬ್ರೇಕಿಂಗ್ ನ್ಯೂಸ್
Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ… ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಯುವಕ – ಯುವತಿಯರಿಗೆ ಉದ್ಯೋಗ ಸೃಷ್ಟಿಯಾದರೆ ದೇಶ ಸದೃಢ: ಬಿಳಿನೆಲೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

12/04/2024, 18:39

ಕಡಬ(reporterkarnataka.com): ಪ್ರತಿ ಯುವಕ – ಯುವತಿಯರಿಗೆ ಉದ್ಯೋಗ ಸಿಗಬೇಕು. ಪ್ರತಿ ಮನೆಯೂ ಸದೃಢಗೊಂಡಾಗ ಈ ಸಮಾಜ ಬಲಿಷ್ಠವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಬಹಿರಂಗ ಚುನಾವಣಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಗೆ ಉದ್ದಿಮೆಗಳು ಬರಬೇಕು. ವಿದೇಶಿ ಬಂಡವಾಳ ಹೂಡಲು ಇಲ್ಲಿ ಸಾಕಷ್ಟು ಅವಕಾಶ ಇದೆ. ಮೆಡಿಕಲ್ ಟೂರಿಸಂ, ಶೈಕ್ಷಣಿಕ ಟೂರಿಸಂ, ಪ್ರವಾಸೋದ್ಯಮಕ್ಕೆ ವಿಫುಲ ಸಾಧ್ಯತೆಗಳಿವೆ. ಹೀಗಿರುವಾಗ ನಮ್ಮೂರಿನ ಯುವಕ – ಯುವತಿಯರು ಉದ್ಯೋಗಕ್ಕಾಗಿ ಹೊರ ಊರುಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿಯಾದರೆ ಅದೇಷ್ಟೋ ಹೆತ್ತವರು ತಮ್ಮ ಮಕ್ಕಳ ಜೊತೆಯಲ್ಲೇ ಜೀವನ ಸಾಗಿಸಬಹುದು. ಇದನ್ನು ನನಸು ಮಾಡುವುದೇ ತನ್ನ ಹಾಗೂ ಕಾಂಗ್ರೆಸಿನ ಆದ್ಯತೆ ಎಂದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದರಲ್ಲಿ ಯಾವುದೇ ಸಂದೇಹ ಬೇಡ ಎಂದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಉಸ್ತುವಾರಿ ರಮಾನಾಥ ರೈ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ. ದೇಶದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ, ಈಗ ನೀಡಿರುವ ಭರವಸೆಗಳನ್ನು ಈಡೇರಿಸಲಾಗುವುದು. ಪದ್ಮರಾಜ್ ಆರ್. ಪೂಜಾರಿ ಅವರನ್ನು ಸಂಸತ್ ಸದಸ್ಯರಾಗಿ ಮಾಡಬೇಕಿದೆ ಎಂದರು.
ಸುಳ್ಯ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿ, ಸಂಯೋಜಕರಾದ ಶಕುಂತಳಾ ಶೆಟ್ಟಿ, ಜಿ. ಕೃಷ್ಣಪ್ಪ, ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿಯ ಪಿ.ಪಿ. ವರ್ಗೀಸ್, ವೆಂಕಪ್ಪ ಗೌಡ, ತಾಪಂ ಮಾಜಿ ಸದಸ್ಯರಾದ ಅಶೋಕ್ ನೆಕ್ರಾಜೆ, ಫಝಲ್, ಪ್ರಮುಖರಾದ ಸರ್ವೋತ್ತಮ ಗೌಡ, ಕಿರಣ್ ಬುಡ್ಲೆಗುತ್ತು, ಬಾಲಕೃಷ್ಣ ಬಲ್ಲೇರಿ, ಜಯರಾಜ್, ಗಣೇಶ್ ಕೈಕುರೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು