8:24 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್ ಪಿಜಿ ತಂಡದಿಂದ ರಿಹರ್ಸಲ್, ಭದ್ರತಾ ಪರಿಶೀಲನೆ

13/04/2024, 23:25

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಶನಿವಾರ ರಾತ್ರಿ ರಿಹರ್ಸಲ್ ಮೂಲಕ ಎಸ್ ಪಿಜಿ ತಂಡ ಭದ್ರತಾ ಪರಿಶೀಲನೆ ನಡೆಸಿತು.





ಮಂಗಳೂರು ವಿಮಾನ ನಿಲ್ದಾಣದಿಂದಲೇ ಎಸ್ ಪಿಜಿ ತಂಡದ ಮುಖ್ಯಸ್ಥ ಹಾಗೂ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಭದ್ರತಾ ಸಿಬ್ಬಂದಿಗಳ ಜತೆ ಲೇಡಿಹಿಲ್ ನ ಶ್ರೀ ನಾರಾಯಣ ಗುರು ವೃತ್ತದವರೆಗೆ ರಿಹರ್ಸಲ್ ನಡೆಸಿ ಭದ್ರತಾ ಪರಿಶೀಲನೆ ನಡೆಸಿದರು. ನಂತರ ನಾರಾಯಣ ಗುರು ವೃತ್ತದಿಂದ ನವಭಾರತ್ ಸರ್ಕಲ್ ವರೆಗೆ ತೆರೆದ ಜೀಪಿನಲ್ಲಿ ಎಸ್ ಪಿಜಿ ತಂಡ ತೆರಳಿತು.
ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ತಂಡ ಈಗಾಗಲೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಶನಿವಾರ ರಾತ್ರಿ ಎಸ್ ಪಿಜಿ ತಂಡವು ಪ್ರಧಾನಿ ಮೋದಿ ಅವರ ರೋಡ್ ಶೋ ಸಾಗಲಿರುವ ಎಂ.ಜಿ. ರೋಡ್ ಸೇರಿದಂತೆ ಆಯಕಟ್ಟಿನ ಎಲ್ಲ ಕಡೆಗಳಲ್ಲಿ ಅಂತಿಮ ಸಿದ್ದತೆಯ ಪರಿಶೀಲನೆ ನಡೆಸಿತು.ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ.
ನಗರದಲ್ಲಿ ಏ.29ರಂದು ಪ್ರಧಾನಿ ಮೋದಿ ಅವರ ರೋಡ್ ಶೋ ಆಯೋಜಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರ ಪ್ರಧಾನಿ ಪ್ರಚಾರ ನಡೆಸಲಿದ್ದಾರೆ.


ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಡಿವೈಡರ್ ಹಾರಿ ಯಾರೂ ರಸ್ತೆ ದಾಟದಂತೆ ಈ ವ್ಯವಸ್ಥೆ ಮಾಡಲಾಗಿದೆ. ಶ್ವಾನ ಹಾಗೂ ಬಾಂಬ್ ಸ್ಕ್ವಾಡ್ ನಿಂದ ಹಲವು ಸುತ್ತಿನ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು