3:39 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್‌ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ

14/04/2024, 18:59

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ ಕಡಲನಗರಿಯತ್ತ ಸಾಗುತ್ತಿದೆ.


ರೋಡ್ ಶೋ ಆರಂಭವಾಗಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಕೊನೆಗೊಳ್ಳಲಿರುವ ನವಭಾರತ ಸರ್ಕಲ್ ವರೆಗೆ ಎಲ್ಲ ರೀತಿಯ ಅಂತಿಮ ಸಿದ್ಧತೆ ಪೂರ್ಣಗೊಂಡಿದೆ. ರಸ್ತೆಯ ಇಕ್ಕಡೆಗಳಲ್ಲಿ ಜನಸಮೂಹ ಸೇರಲಾರಂಭಿಸಿದೆ.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸುವರು.
ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸುವರು.

ಇತ್ತೀಚಿನ ಸುದ್ದಿ

ಜಾಹೀರಾತು