6:55 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಪ್ರಧಾನಿ ರೋಡ್‌ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ

14/04/2024, 20:57

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು.







ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದರು. ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲೆಗಳಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಸಾರ್ವಜನಿಕರು ಸೇರಿದ್ದರು. ಜನರು ಹರ್ಷೋದ್ಘಾರ ನಡುವೆ ಹೂವಿನ ಪಕಳವನ್ನು ಪ್ರಧಾನಿಯತ್ತ ಚೆಲ್ಲಿ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಿ ಜನಸಮೂಹದತ್ತ ಕೈಬೀಸುತ್ತಲೇ ಸಾಗಿದರು. ನವಭಾರತ ಸರ್ಕಲ್ ಬಳಿ ರೋಡ್ ಶೋ ಸಮಾಪ್ತಿಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು