4:38 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ 65ನೇ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ

14/04/2024, 23:56

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ
ಮಾಡೂರು ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಜಂಟಿ ಸಹಯೋಗದೊಂದಿಗೆ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿರುವ
ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ಜರುಗಿತು.
ಸಮುದಾಯ ದಂತ ಆರೋಗ್ಯ ವಿಭಾಗ, ದೇರಳಕಟ್ಟೆಯ
ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ನುರಿತ ತಜ್ಞ ವೈದ್ಯ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ
ಜರುಗಿತು.
ಕಾರ್ಯಕ್ರಮವನ್ನು ದೇರಳ ಕಟ್ಟೆಯ ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ. ಅಪೂರ್ವ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆ ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆಡುಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 12 ವರ್ಷಗಳಿಂದ ವೈದ್ಯಕೀಯ ಶಿಬಿರವನ್ನು ನಿರಂತರ ಏರ್ಪಡಿಸುತ್ತಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸಂಘದ 65ನೇ ಉಚಿತ ವೈದ್ಯಕೀಯ ಶಿಬಿರವು ಇದಾಗಿದ್ದು, ಮುಂದಿನ ದಿನಗಳಲ್ಲಿ ಉಳ್ಳಾಲದ ಪರಿಸರದಲ್ಲೂ ಶಿಬಿರವನ್ನು ಆರೋಜಿಸಲಾಗುವುದೆಂದು ತಿಳಿಸಿದರು.
ಸಂಘವು 2023-24 ನೇ ಸಾಲಿನಲ್ಲಿ 3.3 ಕೋಟಿ ಲಾಭ ಗಳಿಸಿರುವುದು ಸಂಘದ ಪ್ರಗತಿಗೆ ಕಾರಣವಾಗಿದೆ. ಸಂಘವು ಈ ಆರ್ಥಿಕ ಸಾಲಿನಲ್ಲಿ 5 ಶಾಖೆಗಳನ್ನು ಪಕ್ಷಿಕೆರೆ, ಎಲ್ಯಾರ್ ಪದವು, ಕೃಷ್ಣಾಪುರ, ಕಲ್ಲಾಪು ಮತ್ತು ಮೂಡಬಿದಿರೆಯಲ್ಲಿ ತೆರೆಯಲಾಗುವುದು.
ಸಂಘ ಲಾಭದಲ್ಲಿ ಸಂಘದ ಸದಸ್ಯರ ಆರೋಗ್ಯ ಕಾಳಜಿಯಿಂದ ಇಂತಹ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು, ಸಂಘದ ಸದಸ್ಯರಿಗೆ ಕೋರೋನ ಸಮಯದಲ್ಲಿ ಶೇ 4ರ ಬಡ್ಡಿದಲ್ಲಿ ಚಿನ್ನಾಭರಣ ಸಾಲ ಮತ್ತು ಮನ್ಸೂನ್ ಸಮಯದಲ್ಲಿಯೂ ಕೂಡ ಮನ್ಸೂನ್ ವಿಶೇಷ ಬಡ್ಡಿದರದಲ್ಲಿ ಸಾಲವನ್ನು ನೀಡಿ ಆರ್ಥಿಕವಾಗಿ ಸಹಕಾರಿಯಾಗಿರುವುದು ಸಮಾಜಿಕ ಕೈಗನ್ನಡಿಯಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್, ನಿರ್ದೇಶಕರಾದ ಆನಂದ ಎಸ್. ಕೊಂಡಾಣ ಮತ್ತು ಗೋಪಾಲ್ ಎಂ, ಚಂದ್ರಹಾಸ್ ಮರೋಳಿ ಹಾಗೂ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೋಕ್ತೇಸರರಾದ ಸುರೇಶ್ ಕೆ.ಪಿ. ಮತ್ತು ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ.
ಅಪೂರ್ವ ಕೋಟ್ಯಾನ್ ಹಾಗೂ ಪಿ.ಆರ್.ಓ ಭರತ್ ಕುಮಾರ್ ಮತ್ತು ಅತ್ತಾವರ ಕೆಎಂಸಿ ಆಸ್ಪತ್ರೆ ವೈದ್ಯರಾದ ಡಾ. ಸಂಜನಾ ಮತ್ತು ಡಾ. ರಾಹುಲ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ಅವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಸಖಘದ ಹಿರಿಯ ಶಾಖಾಧಿಕಾರಿಯಾದ ರವಿಕಲಾ ವಿಶ್ವನಾಥ್ ಸ್ವಾಗತಿಸಿದರು. ಉಳ್ಳಾಲ ಶಾಖೆಯ ಶಾಖಾಧಿಕಾರಿಯಾದ ಭವ್ಯ ಯೋಗೀಶ್ ವಂದಿಸಿದರು. ಮಾಡೂರು ಶಾಖೆಯ ಶಾಖಾಧಿಕಾರಿ ಸೌಮ್ಯಲತಾ
ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು