7:38 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ: ಪದ್ಮರಾಜ್ ಆರ್. ಪೂಜಾರಿ

16/04/2024, 16:03

ವಿಟ್ಲ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು.
ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು. ಪುತ್ತೂರು ಪೇಡೆಯಾದ್ಯಂತ ಸಂಚರಿಸಿದ ರೋಡ್ ಶೋ, ವಿಟ್ಲ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು. ಬಳಿಕ ವಿಟ್ಲ ಸಂತೆ ಮಾರುಕಟ್ಟೆಗೆ ತೆರಳಿ ಮತ ಯಾಚನೆ ನಡೆಸಿದರು.


ರೋಡ್ ಶೋ ಉದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಭ್ಯರ್ಥಿಗೆ ಸಾಥ್ ನೀಡಿದರು.
*ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ: ಪದ್ಮರಾಜ್ ಆರ್. ಪೂಜಾರಿ:* ದಕ್ಷಿಣ ಕನ್ನಡ ಜಿಲ್ಲೆಗೆ ಮೂಲಸೌಕರ್ಯ ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡಿರುವುದು ಕಾಂಗ್ರೆಸ್ ಪಕ್ಷದ ಸಂಸದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿ ಸಂಸದರು, ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ. ಕನಿಷ್ಠ, ಕಾಂಗ್ರೆಸ್ ಸಂಸದರು ನೀಡಿದ ಅಭಿವೃದ್ಧಿ ಕೊಡುಗೆಗಳನ್ನು ಇನ್ನಷ್ಟು ಉನ್ನತೀಕರಿಸುವ ಕೆಲಸವನ್ನೂ ಮಾಡಿಲ್ಲ. ಆದರೆ ಕಾಂಗ್ರೆಸ್ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಿದೆ. ಮುಂದೆ ಚುನಾವಣೆಯಲ್ಲಿ ಜಯ ಗಳಿಸಿದ ನಂತರ ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್ ಹೇಳಿದರು.
*ಕಾಂಗ್ರೆಸ್ ಜನಪರ, ಅಭಿವೃದ್ಧಿ ಪರ: ಅಶೋಕ್ ರೈ*: ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡಿ ಕಾಂಗ್ರೆಸ್ ಜನಪರ, ಅಭಿವೃದ್ಧಿ ಪರ ಸರಕಾರ ಎಂಬುದನ್ನು ರಾಜ್ಯ ಸರಕಾರ ನಿರೂಪಿಸಿ ತೋರಿಸಿದೆ. ಈ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಮತವಾಗಿ ಪರಿವರ್ತನೆ ಆಗಲಿದೆ ಎಂದರು.
*ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ:* ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಅರಮನೆ, ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತಾ ದೇವಾಲಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಆಶೀರ್ವಾದ ಪಡೆದರು.
ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಉಸ್ತುವಾರಿ ರಮಾನಾಥ ವಿಟ್ಲ, ಕಾವು ಹೇಮನಾಥ ಶೆಟ್ಟಿ, ವಿಟ್ಲ ಅರಮನೆಯ ಕೃಷ್ಣಯ್ಯ, ಜಯಪ್ರಕಾಶ್ ಬದಿನಾರು, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಪಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಕೆಪಿಸಿಸಿ ಸದಸ್ಯ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ವಿಜಯ ಕುಮಾರ್ ಆಳ್ವ, ವೇದನಾಥ ಸುವರ್ಣ, ಮಸೀದಿ ಸದರ್ ಅಬ್ದುಲ್ಲಾ ದಾರಿಮಿ, ವಿಟ್ಲ ಜಮಾತ್ ಅಧ್ಯಕ್ಷ ಮಹಮ್ಮದ್ ಅಶ್ರಫ್ ಪೊನ್ನೊಟ್ಟು, ಕಮಿಟಿ ಸದಸ್ಯ ರಶೀದ್ ವಿಟ್ಲ, ಅಜೀಜ್ ಹಳೆಮನೆ, ಮಹಮ್ಮದ್ ಇಕ್ಬಾಲ್, ವಿ.ಕೆ. ಹಂಝ, ನಜೀರ್ ಮಠ, ಚರ್ಚ್ ಧರ್ಮಗುರು ಐವನ್ ಮೈಕಲ್ ರೋಡ್ರಿಗಸ್, ವಿಜಯ್ ಪಾಯಸ್ ಥೋಮಸ್ ಮಸ್ಕರೇನಸ್, ಲೂಯಿಸ್ ಮಸ್ಕರೇನಸ್, ಜೆಸಿಂತಾ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು