7:26 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು