2:44 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ

18/04/2024, 21:19

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.
ಕಟಿಲು ಮುಖ್ಯ ರಸ್ತೆ (ರಥ ಬಿದಿ) ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರೆ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು