ಇತ್ತೀಚಿನ ಸುದ್ದಿ
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ; ತಪ್ಪಿದ ಭಾರೀ ದುರಂತ
19/04/2024, 23:05
ಮಂಗಳೂರು(reporterkarnataka.com): ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿಯ ಎಡಪದವು ಪೇಟೆಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿ ಅಪಘಾತ ನಡೆಸಿದ ಘಟನೆ ನಡೆದಿದೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿ ಗುದ್ದಿದೆ. ಬಳಿಕ ಖಾಸಗಿ ಬಸ್, ಲಾರಿ , ಕಾರು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋಗಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಭಾರೀ ಅವಘಡ ತಪ್ಪಿದೆ.
ಲಾರಿ ಕಟ್ಟಡಕ್ಕೆ ಗುದ್ದಿದ ಪರಿಣಾಮ ಮೂರು ಅಂಗಡಿಗಳಿಗೆ ಭಾರಿ ಹಾನಿಯಾಗಿದೆ. ಲಾರಿ, ಖಾಸಗಿ ಬಸ್ ಜಖಂಗೊಂಡಿದ್ದು, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ಸ್ಕೂಟರ್ ಗಳು ಜಖಂಗೊಂಡಿದೆ. ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸರಣಿ ಅಪಘಾತ ನಡೆದಿದೆ.
ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.