7:52 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ: ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ; ಹಂತಕನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ

20/04/2024, 18:12

ಬೆಳಗಾವಿ(reporterkarnataka.com): ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಬೆಳಗಾವಿಯ
ಚನ್ನಮ್ಮ‌ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನೇಹಾ ಹಿರೇಮಠ ಕೊಲೆಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ ಹಾಗೂ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆಗಳು ಇಲ್ಲಿನ ಚನ್ನಮ್ಮ‌ ವೃತ್ತದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಎಂಸಿಎ ವಿಭಾಗದಲ್ಲಿಯೇ ಹಳೆ ವಿದ್ಯಾರ್ಥಿಯಾಗಿದ್ದ ಫಯಾಜ್ ಎಂಬ ಅನ್ಯಕೋಮಿನ‌ ಯುವಕ ನೇಹಾಳ‌ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ ಗುರುವಾರ ಪರೀಕ್ಷೆ ಬರೆದು ಮನೆಗೆ ಹಿಂತಿರುಗಿ ಹೋಗುವಾಗ ನೇಹಾಳನ್ನು ಕಾಲೇಜ್ ಕ್ಯಾಂಪಸ್ ನಲ್ಲಿಯೇ ಚಾಕುವಿನ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ ಸಂಘಟನೆಗಳು ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದವು.
ಮಹಾಂತೇಶ ರಣಗಟ್ಟಗಿಮಠ, ವೀರುಪಾಕ್ಷಿ ನೀರಲಗಿಮಠ, ಶಂಕ್ರಯ್ಯ ಹಿರೇಮಠ, ದಿಗ್ವಿಜಯ ಸಿದ್ನಾಳ,‌ಮಹಾಂತೇಶ ಒಕ್ಕುಂದ, ಮುರುಗೇಶ ಹಿರೇಮಠ, ರಮಾಕಾಂತ ಕೊಂಡುಸ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು