10:09 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಬೃಹತ್ ರೋಡ್ ಶೋ: ಭಾರೀ ಜನಸ್ತೋಮ

21/04/2024, 23:30

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಲ್ಯ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ,ರಾಣಿ ಅಬ್ಬಕ್ಕ ವೃತ್ತದವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬೃಹತ್ ರೋಡ್ ಶೋ ನಡೆಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಪದ್ಮರಾಜ್ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವವನ್ನು ಮರಳಿ ಬರುವುದು ನಿಶ್ಚಿತ ಎಂದು ಹೇಳಿದರು.
ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
ಇಫ್ತಿಕರ್ ಆಲಿ, ಮಾಜಿ ಕೇಂದ್ರ ವೀರಪ್ಪ ಮೊಲಿ,ದ.ಕ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು