11:04 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

22/04/2024, 19:15

ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ ‘ಪರಿಸರಕ್ಕಾಗಿ ನಾವು’ ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ
ಕೊಟ್ಟರು.
ಘೋಷಣಾ ವಾಕ್ಯಗಳನ್ನು ಮನೆಯಲ್ಲೇ ಲಭ್ಯವಿದ್ದ ಹಳೆ ರಟ್ಟು, ಕಾಗದಗಳನ್ನು ಪಯೋಗಿಸಿ, ಹಳೆ ಪಿವಿಸಿ ಪೈಪ್ ಗಳಿಗೆ ಅಂಟಿಸಿ ಫಲಕಗಳನ್ನು ಮಾಡಿ ಪ್ರದರ್ಶನಕ್ಕೆ ಇಟ್ಟಿದ್ದರು. ಸದಸ್ಯೆಯರಾದ ದೇವಕಿ ಜಿ ಕೆ., ಅಂಜನಿ ವಸಂತ್ ಹಾಗೂ ಸಮಾನಮನಸ್ಕರು ಅವರಿಗೆ ಸಹಕರಿಸಿದರು. ಈ ವರ್ಷದ ಭೂದಿನದ ಘೋಷಣೆಯು ‘ಭೂಗ್ರಹ vs ಪ್ಲಾಸ್ಟಿಕ್’. ಪ್ಲಾಸ್ಟಿಕ್ ನ ದುಷ್ಪರಿಣಾಮಗಳು, ಅದಕ್ಕೆ ಪರ್ಯಾಯ, ಗೊಬ್ಬರ ತಯಾರಿಕೆ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂತು. ಸಾಧಾರಣ 60 ಜನರನ್ನು ತಲಪಲು ಸಾಧ್ಯವಾಯಿತು. ಮುಂಗಡವಾಗಿ ಈ ಮೇಲ್ ಮೂಲಕ ಪಾರ್ಕಿನ ಆಡಳಿತದವರಿಂದ ಅನುಮತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಮಾಡಲಾಯಿತು. ಮುಂದೆಯೂ ಈ ರೀತಿಯ ಸರಳ ವಿಧಾನಗಳಿಂದ ಹೆಚ್ಚಿನ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಒಗ್ಗೂಡಿದರೆ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು