ಇತ್ತೀಚಿನ ಸುದ್ದಿ
ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
22/04/2024, 19:20
ಬಂಟ್ವಾಳ(reporterkarnataka.com): ಅಪಪ್ರಚಾರ ನಡೆಸುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ನಮ್ಮ ಕೆಲಸವೇ ಅವರಿಗೆ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಮಣಿನಾಲ್ಕೂರು ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸರಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕೆಲವರು ಅಪಪ್ರಚಾರದ ಕೆಲಸವನ್ನು ಎಗ್ಗಿಲ್ಲದೆ ಮಾಡುತ್ತಿದ್ದಾರೆ. ಬಿಲ್ಲವ ಸಮಾಜದ ಬಗ್ಗೆಯೂ ಇಲ್ಲಸಲ್ಲದ ಮಾತನಾಡುತ್ತಿದ್ದಾರೆ. ತಾನೇನು ಅವರ ಬಗ್ಗೆ ಹೇಳುವುದಿಲ್ಲ. ಆದರೆ ದೈವ – ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದಷ್ಟೇ ಕೇಳಿಕೊಳ್ಳುತ್ತಿದ್ದೇನೆ ಎಂದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪೀಯೂಷ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸಂಪತ್ ಕುಮಾರ್ ಶೆಟ್ಟಿ, ಸುರೇಶ್ ಪೂಜಾರಿ ಜೋರಾ, ಕಾಂಚಲಾಕ್ಷಿ, ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.