2:06 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಗಡುವು ಮುಗಿದರೂ ವಾಪಸ್ ಪಡೆಯದ ನಾಮಪತ್ರ: ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ

22/04/2024, 21:02

ಶಿವಮೊಗ್ಗ(reporterkarnataka.com): ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಮುಗಿಯುತ್ತಿದ್ದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡುಕೋರ ಅಭ್ಯರ್ಥಿ, ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯುತ್ತಾರೆ ಅಂತ ಕಾದು ಕುಳಿತಿದ್ದ ಬಿಜೆಪಿ, ಈಶ್ವರಪ್ಪ ಅವರು ನಿಲುವು ಬದಲಾಯಿಸದ ಹಿನ್ನೆಲೆಯಲ್ಲಿ
ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿತ್ತು. ಗಡುವು ಮುಗಿದ ಬೆನ್ನಲ್ಲೆ ಚುನಾವಣಾಧಿಕಾರಿಗಳು ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದ್ದರು. ಅದರ ಬೆನ್ನಲ್ಲೆ ರಾಜ್ಯ ಬಿಜೆಪಿಯು ಈಶ್ವರಪ್ಪ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್​ ಪಾಟೀಲ್​ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು