ಇತ್ತೀಚಿನ ಸುದ್ದಿ
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ ಪರ ಪ್ರಚಾರ
23/04/2024, 09:58
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದ ಹಳೆ ಮಾಧ್ಯಮಿಕ ಶಾಲೆ ಮೈದಾನದಲ್ಲಿ ಆಯೋಜಿಸಲಾದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರ ಬೊಮ್ಮನಹಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಮುಂತಾದವರು ಪಾಲ್ಗೊಳ್ಳುವರು.