10:25 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು