ಇತ್ತೀಚಿನ ಸುದ್ದಿ
ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ; ಮದ್ಯ ನಿಷೇಧ
25/04/2024, 20:19
ಬೆಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಸಕಲ ಸಿದ್ಧತೆ ನಡೆದಿದೆ.
ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿತ್ತು. ನಂತರ ವಿವಿಧ ರಾಜಕೀಯ ಪಕ್ಷಗಳಿಂದ ಮನೆ ಮನೆ ಪ್ರಚಾರ ಕಾರ್ಯ ನಡೆಯಿತು.
ಮತದಾನ ನಡೆಯುವ 48 ತಾಸುಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಇದರಂತೆ ಬುಧವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇದರೊಂದಿಗೆ ಮದ್ಯದಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್ ಗೆ ಬೀಗ ಹಾಕಲಾಗಿದೆ.
ಮೊದಲ ಹಂತದ ಚುನಾವಣೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನಿತರ ನಾಯಕರು ಹಾಗೂ ಮುಖಂಡರಿಗೆ ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ.