ಇತ್ತೀಚಿನ ಸುದ್ದಿ
ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ
25/04/2024, 20:32
ಉಪ್ಪಿನಂಗಡಿ(reporterkarnataka.com): ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಫ್ಯಾಶನ್ ಡಿಸೈನರ್ ಕಲಿಯುತ್ತಿದ್ದ
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಖಾಸಗಿ ಬಸ್ಸಿನಲ್ಲಿ ಊರಿಗೆ ಪ್ರಯಾಣಿಸಿದ್ದರು. ಬಸ್ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಗೆ ತನ್ನ ಮೈಮೇಲೆ ಸಹಪ್ರಯಾಣಿಕ ಕೈಯಾಡಿಸಿರುವುದು ಗಮನಕ್ಕೆ ಬಂತು. ಬಳಿಕ ಮತ್ತೊಮ್ಮೆ ಇದೇ ಯತ್ನ ನಡೆದಾಗ ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ಯುವತಿ ತಂದರು. ಆದರೆ ಚಾಲಕ ಸಕರಾತ್ಮಕವಾಗಿ ಸ್ಪಂದಿಸಿಲ್ಲ. ಅಷ್ಟರಲ್ಲಿ ಬಸ್ಸಿನಲ್ಲಿದ್ದ ಕೆಲವು ಸಹ ಪ್ರಯಾಣಿಕರು ಯುವತಿಯ ನೆರವಿಗೆ ಧಾವಿಸಿ ಆತನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿಯ ಲಾಯಿಲ ಗ್ರಾಮದ ಮಹಮ್ಮದ್ ಅಝೀಮ್ ಎಂದು ತಿಳಿದು ಬಂತು. ಮುಂದಕ್ಕೆ ದಾರಿ ಮಧ್ಯೆ ಸಿಗುವ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವ ಎಂದು ಆಕೆ ಹೇಳಿದ ಬಳಿಕ ಆರೋಪಿ ಬಸ್ಸಿನ ಕಿಟಕಿಯಿಂದ ಹೊರಗೆ ಹಾರಿ ಪರಾರಿಯಾಗಿದ್ದ. ಪ್ರಕರಣವನ್ನು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿ ಮಹಮ್ಮದ್ ಅಝೀಮ್ ನನ್ನು ಬಂಧಿಸಿ
ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಮಧ್ಯೆ ವಿದ್ಯಾರ್ಥಿನಿ ಮನೆಗೆ
ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಲ ಪ್ರಭಾಕರ್ ಭಟ್ ಭೇಟಿ ಘಟನೆಯ ಮಾಹಿತಿ ಪಡೆದಿದ್ದಾರೆ.