10:03 AM Wednesday27 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!!

26/04/2024, 17:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವಿಭಿನ್ನ ಮತ್ತು ವಿಶೇಷ ಕಾರ್ಯವೈಖರಿಗೆ ಕಾರಣ ಏನು ಅಂತೀರಾ ಇಲ್ಲಿದೆ ನೋಡಿ..!


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯಲ್ಲಿ ನಡೆಯುತ್ತಿರುವ ಮತದಾನ.
ಬಿಳಿ ಶರ್ಟ್ ಪಂಚೆ, ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಸಿಬ್ಬಂದಿಗಳು.
ಪ್ರಜಾಪ್ರಭುತ್ವದ ಹಬ್ಬ ಆಚರಣೆಗೆ ಸಾಂಸ್ಕೃತಿಕ ಸೌರಭ ಎಂಬ ಮತಗಟ್ಟೆ ತೆರೆದು ವಿನೂತನವಾಗಿ ಮತದಾರರಿಂದ ಮತದಾನ ಮಾಡಿಸಿಕೊಳ್ಳುತ್ತಿರುವ ಅಧಿಕಾರಿಗಳು.
ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯುವ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಖಿ, ರೈತ ಮತ್ತು ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ ಆದರೆ ಇಲ್ಲಿ ತೆಂಗಿನ ಗರಿಯ ಚಪ್ಪರಹಾಕಿ ಮಾವು, ಬಾಳೆ,ತಳಿರು ಕಟ್ಟಿ ಸ್ವಾಗತಿಸಿ ಮತದಾರರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮತಗಟ್ಟೆಯಾಗಿದೆ.
ಚುನಾವಣಾ ಅಧಿಕಾರಿಗಳ ಈ ಒಂದು ಪ್ರಜಾಪ್ರಭುತ್ವದ ಹಬ್ಬದ ಕಾರ್ಯವೈಕರಿಗೆ ಹ್ಯಾಟ್ಸಾಫ್ ಎನ್ನುತ್ತಾರೆ ಮತದಾರರು.
.

ಇತ್ತೀಚಿನ ಸುದ್ದಿ

ಜಾಹೀರಾತು