5:55 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮಗ ಪರಾರಿಯಾದ ಬೆನ್ನಲ್ಲೇ ಅಪ್ಪನೂ ನಾಪತ್ತೆ: ಹೊಳೆನರಸೀಪುರ ಮನೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಎಚ್.ಡಿ. ರೇವಣ್ಣ

29/04/2024, 18:28

ಹಾಸನ(reporterkarnataka.com): ಹಾಸನ ಲೋಕಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದೆನ್ನಲಾದ ಆಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿಯಾದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಬಂಧನ ಭೀತಿಯಿಂದ ತಮ್ಮ ಹೊಳೆನರಸೀಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರೇವಣ್ಣ ಅವರು ಎ1 ಮತ್ತು ಪ್ರಜ್ವಲ್ ಅವರು ಎ2 ಆರೋಪಿಯಾಗಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ಜೀವ ಭಯ ಇರುವುದರಿಂದ ದೂರು ದಾಖಲಿಸಲು ವಿಳಂಬವಾಗಿದೆ ಎಂದು ಸಂತ್ರಸ್ತ ಮಹಿಳೆ ತಿಳಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರು ಏ. 26ರಂದು ಮತದಾನ ಮುಗಿದರೆ ಏ.27ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 2.30ಕ್ಕೆ ಜರ್ಮನಿಗೆ ತೆರಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು