ಇತ್ತೀಚಿನ ಸುದ್ದಿ
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಕಾಸರಗೋಡಿನ ಒಂದೇ ಕುಟುಂಬದ 5 ಮಂದಿ ದಾರುಣ ಸಾವು
30/04/2024, 17:23
ಕಣ್ಣೂರು(reporterkarnataka.com): ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದ
ಕಾರು ಮತ್ತು ಲಾರಿ ಅಪಘಾತದಲ್ಲಿ ಕಾಸರಗೋಡು ಮೂಲದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಕೆ.ಎನ್.ಪದ್ಮಕುಮಾರ್ (59), ಭೀಮನಡಿ ಚೂರಿಕ್ಕಾಡ್ ನಿವಾಸಿ ಸುಧಾಕರನ್(52), ಸುಧಾಕರನ್ ಅವರ ಪತ್ನಿ ಅಜಿತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಪುತ್ರ ಆಕಾಶ್ (9) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಣ್ಣೂರು ಕಡೆಗೆ ತೆರಳುತ್ತಿದ್ದ ಅಡುಗೆ ಅನಿಲ ಸಿಲಿಂಡರ್ ಸಾಗಾಟದ ಲಾರಿ ಮತ್ತು ಕಣ್ಣೂರು ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ನಡುವೆ ಅಪಘಾತ ನಡೆದಿದೆ.