2:55 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಹೋಮಿಯೋಪತಿ ದಿನಾಚರಣೆ

02/05/2024, 14:43

ಮಂಗಳೂರು(reporterkarnataka.com);ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು, ವಿದ್ಯಾರ್ಥಿಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.


ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ವಿಶ್ವ ಹೋಮಿಯೋಪತಿ ದಿನ -2024 ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಹೊರಜಗತ್ತಿನ ದಾಸ್ಯಗಳಿಗೆ ಬಲಿಯಾಗದೆ, ಜೀವನದ ಯಶಸ್ಸಿನ ಹಾದಿಯಲ್ಲಿ ಮುಂದುವರಿಯಿರಿ, ತನ್ನ ಸಹಪಾಠಿಗಳು ಹೋಮಿಯೋಪತಿಯಲ್ಲಿ ವೃತ್ತಿ ಮುಂದುವರಿಸಿ ಯಶಸ್ಸಿನ ಹಾದಿಯಲ್ಲಿದ್ದಾರೆ. ಯಶಸ್ಸಿಗೆ ವಯಸ್ಸಿನ ವಯೋಮಿತಿಯಲ್ಲ. ನಿರಂತರ ಅಧ್ಯಯನ ನಡೆಸುವವರಾಗಿರಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಹೋಮಿಯೋಪತಿ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದವರು ವಿವಿಧ ಕ್ಷೇತ್ರಗಳಲ್ಲಿ ಇದ್ದರೂ ಯಶಸ್ಸಿನ ಹಾದಿಯಲ್ಲಿದ್ದಾರೆ ಎಂದರು.
ಹೋಮಿಯೋಪತಿ ದಿನಾಚರಣೆ ಮೂಲಕ ಹಳೆಯ ವಿದ್ಯಾರ್ಥಿಗಳನ್ನು ಹಾಗೂ ಅವರ ವ್ಯಕ್ತಿತ್ವವನ್ನು ಮೆಲುಕು ಹಾಕುವ ಕಾರ್ಯ ಆಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೇರಳ ಸರಕಾರದ ಹೋಮಿಯೋಪತಿ ವಿಭಾಗದ ವೈದ್ಯಕೀಯ ಅಧಿಕಾರಿ ಡಾ. ಜೆರಾಲ್ಡ್ ಜಯಕುಮಾರ್ ಮತ್ತು ಡಾ. ಬಿನುರಾಜ್ ಟಿ.ಕೆ. ಜತೆಗೂಡಿ ಹೊರತಂದ ‘ಹೋಮಿಯೋ ಎವಿಡೆನ್ಸ್ ಡಾಟ್‌ಕಾಂ ಎಂಬ ಡಿಜಿಟಲ್ ಡಾಟಾಬೇಸ್ ವೆಬ್‌ಸೈಟ್‌ಗೆ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಫಾ. ರೋಷನ್ ಕ್ರಾಸ್ತಾ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು