ಇತ್ತೀಚಿನ ಸುದ್ದಿ
ಅಮೇಠಿ, ರಾಯ್ ಬರೇಲಿ ಅಭ್ಯರ್ಥಿ ಕುರಿತು 24-30 ತಾಸಿನೊಳಗೆ ಘೋಷಣೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್
02/05/2024, 20:59
ಹೊಸದಿಲ್ಲಿ(reporterkarnataka.com): ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ಮುಂದಿನ 24ರಿಂದ 30 ತಾಸಿನೊಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಅಮೇಠಿ ಹಾಗೂ ರಾಯ್ ಬರೇಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ. ಮುಂದಿನ 24-30 ತಾಸಿನೊಳಗೆ ಕಾಂಗ್ರೆಸ್ ಅಧ್ಯಕ್ಷರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
‘ಯಾವುದೇ ವಿಳಂಬವಾಗಿಲ್ಲ. ರಾಯ್ ಬರೇಲಿಯಲ್ಲಿ ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಸ್ಮೃತಿ ಇರಾನಿ ಅಮೇಠಿಯ ಹಾಲಿ ಸಂಸದೆ. ಯಾರಿಗೂ ಭಯವಿಲ್ಲ ಎಂದರು.