3:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​​ಗೆ ಅರ್ಜಿ

02/05/2024, 22:41

ಬೆಂಗಳೂರು(reporterkarnataka.com): ಸೆಕ್ಸ್ ವೀಡಿಯೊ ಪ್ರಕರಣದ ಎ1 ಆರೋಪಿ, ಮಾಜಿ ಸಚಿವ, ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್​. ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.
ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಮಧ್ಯೆ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಕೋರ್ಟ್​ ಮೆಟ್ಟಿಲೇರಿದ್ದಾರೆ.
ಪೊಲೀಸರು ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು ಎ1 ಆರೋಪಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯನ್ನಾಗಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು