ಇತ್ತೀಚಿನ ಸುದ್ದಿ
ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆ ಲಾಕ್: ಎಸ್‌ಐಟಿ ವಶಕ್ಕೆ
05/05/2024, 18:23
ಹಾಸನ(reporterkarnataka.com):ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ ಬಂಗ್ಲೆಯನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.
ಪ್ರಜ್ವಲ್ ರೇವಣ್ಣ ಅವರು ಹಾಸನದ ಇದೇ ಸರಕಾರಿ ಬಂಗ್ಲೆಯಲ್ಲಿ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಗ್ಲೆಗೆ ಬೀಗಮುದ್ರೆ ಹಾಕಲಾಗಿದೆ.
ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಸರಕಾರ ನೀಡಿದ್ದ ಈ ಬಂಗ್ಲೆಯನ್ನು ಪ್ರಜ್ವಲ್ ಬಳಸಿಕೊಳ್ಳುತ್ತಿದ್ದರು.
ಎಸ್‌ಐಟಿ ಅಧಿಕಾರಿಗಳು ಇದೀಗ ಈ ಬಂಗ್ಲೆಯನ್ನು ವಶಕ್ಕೆ ಪಡೆದಿದ್ದಾರೆ. ಸಂಸದರು ಈ ಬಂಗ್ಲೆಯ ರೂಮ್‌ನಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.