8:42 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು