11:38 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ

08/05/2024, 19:46

ಬೆಂಗಳೂರು(reporterkarnataka.com): ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ, ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗುವುದು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಅವರನ್ನು ಮೇ 4 ರಂದು ಹಾಸನದಲ್ಲಿ ಬಂಧಿಸಿದ್ದರು. ಅವರ ಎಸ್ ಐಟಿ ಕಸ್ಟಡಿ ಬುಧವಾರ ಅಂತ್ಯವಾದ ಹಿನ್ನಲೆಯಲ್ಲಿ ಅವರನ್ನು ಇಂದು 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯ ಅವರಿಗೆ ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ರೇವಣ್ಣ ಅವರನ್ನು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು