5:40 PM Thursday9 - January 2025
ಬ್ರೇಕಿಂಗ್ ನ್ಯೂಸ್
ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಂತಾಪ

08/05/2024, 20:18

ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಕಾಂಗ್ರೆಸ್ ಮುಖಂಡ, ನನ್ನ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಮೊನ್ನೆ ಮೊನ್ನೆಯವರೆಗೂ ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕೆ ಮಾರ್ಗದರ್ಶನ ಮಾಡುತ್ತಾ, ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದರು. ವಸಂತ ಬಂಗೇರ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದೆ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು