7:39 AM Thursday11 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ದ್ವಿತೀಯ; ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಟಾಪರ್

09/05/2024, 12:05

ಬೆಂಗಳೂರು(reporterkarnataka.com):ರಾಜ್ಯಮಟ್ಟದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಅವರು ಫಲಿತಾಂಶ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಬರೆದಿದ್ದಾರೆ. ಇದರಲ್ಲಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು.
ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಸ್ಥಾನ ವನ್ನು ದಕ್ಷಿಣ ಕನ್ನಡ ಜಿಲ್ಲೆ ಪಡೆದಿದೆ.
ಫಲಿತಾಂಶವನ್ನು sslc.karnataka.gov.in ಅಥವಾ kseab.karnataka.gov.in
ವೆಬ್​ಸೈಟ್​ನಲ್ಲಿ ಪರಿಶೀಲಿಸಬಹುದಾಗಿದೆ.
ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.
ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ.
ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು