2:35 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ; ಮಾಜಿ ಸಚಿವ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಂತಿಮ ದರ್ಶನ

09/05/2024, 17:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಬೆಳ್ತಂಗಡಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.


ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬುಧವಾರ ಸಂಜೆ ನಿಧನರಾಗಿದ್ದರು. ಗುರುವಾರ ಮುಂಜಾನೆ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿಯ ನಿವಾಸಕ್ಕೆ ತರಲಾಗಿತ್ತು. ಅಲ್ಲಿ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳ್ತಂಗಡಿ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
ವಸಂತ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಗೊಂಡಿದ್ದರು. ತನ್ನದೇ ಆದ ಚರಿಷ್ಮಾದಿಂದ ಅವರು ಯಾವುದೇ ಪಕ್ಚದ ಹಂಗಿಲ್ಲದೆ ಗೆಲ್ಲುವ ಗಟ್ಟಿತನವನ್ನು ಹೊಂದಿದ್ದರು. ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ನಿಂದ ಆಯ್ಕೆಗೊಂಡಿರುವುದೇ ಇದಕ್ಕೆ ಸಾಕ್ಷಿ. ಬಡವರ ಪರ, ಶೋಷಿತರ ಪರ ಯಾವಾಗಲೂ ದೃಢವಾಗಿ ನಿಲ್ಲುತ್ತಿದ್ದ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ತನ್ನ ಅನಾರೋಗ್ಯದ ನಡುವೆಯೂ ಸೌಜನ್ಯ ಪರ ಹೋರಾಟದಲ್ಲಿ ಧ್ವನಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು