8:44 PM Monday7 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 ಉದ್ಘಾಟನೆ

10/05/2024, 13:35

ಮಂಗಳೂರು(reporterkarnataka.com): ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು.
ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕ, ಬ್ಯಾಂಕಿಂಗ್ ಇನ್ನಿತರ ರಂಗಗಳಲ್ಲಿ ಮೇರು ಸಾಧನೆ ಮಾಡುವಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ, ಉಳ್ಳಾಲ ಶ್ರೀನಿವಾಸ ಮಲ್ಯ , ಟಿ.ಎಂ.ಎ.ಪೈ ಹೀಗೆ ಅನೇಕ ಸಾಧಕರ ಕೊಡುಗೆಯಿದೆ. ಈ ಹಾದಿಯಲ್ಲಿ ಇನ್ನಷ್ಟು ಬೆಳೆಯುತ್ತಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಪ್ರಗತಿಯ ಬಗ್ಗೆ ಹೆಮ್ಮೆ ಅನಿಸಿದೆ ಎಂದವರು ಶ್ಲಾಘಿಸಿದರು.
ಸಮಾರಂಭದ ಅಧ್ಯ
ಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶಿಕ್ಷಣದ ಜತೆಗೆ ಸೃಜನ ಶೀಲ ಚಿಂತನೆ, ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ, ಕೆನರಾ ಶಿಕ್ಷಣ ಸಂಸ್ಥೆಗಳು ಮೌಲ್ಯಗಳ ಜತೆಗೆ ನಿರಂತರ ಪ್ರಗತಿ, ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಕಾರ್ಯ ಯೋಜನೆಯಲ್ಲಿ ಯಶಸ್ಸು ಕಾಣುತ್ತಿರುವುದರ ಹಿಂದೆ ಟೀಂ ವರ್ಕ್ ಕೊಡುಗೆಯಿದೆ ಎಂದರು.
ಪ್ರಾಂಶುಪಾಲ ಡಾ. ನಾಗೇಶ್ ಎಚ್.ಆರ್. ವಾರ್ಷಿಕ ವರದಿ ವಾಚಿಸಿದರು. ಉಪ ಪ್ರಾಂಶುಪಾಲ ಡಾ.ಡೇಮಿಯನ್ ಎ. ಡಿಮೆಲ್ಲೋ, ಅತಿಥಿಯನ್ನು ಪರಿಚಯಿಸಿ ಸ್ವಾಗತಿಸಿದರು. ಪ್ರತಿಭಾನ್ವಿತರು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಿದ್ಧಾರ್ಥ ಕಿಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈವಂದಿಸಿದರು. ವಿದ್ಯಾರ್ಥಿನಿ ಶ್ವೇತಾ ಬಾಳಿಗಾ ಕಾರ್ಯಕ್ರಮ ನಿರೂಪಿಸಿದರು.
ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ಕೆ.ಸುರೇಶ್ ಕಾಮತ್, ಉಪ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್, ಸದಸ್ಯ ಶಿವಾನಂದ ಶೆಣೈ, ಆಡಳಿತ ಕೌನ್ಸಿಲ್ ಸದಸ್ಯ ವಿನಾಯಕ್ ಕಾಮತ್, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈ, ಉಪಾಧ್ಯಕ್ಷೆ ಶಿವಾಲಿ, ಕಾರ್ಯದರ್ಶಿ ಮಹೇಶ್ ಪೈ, ಜತೆ ಕಾರ್ಯದರ್ಶಿ ಆದಿತ್ಯ ಭಕ್ತ, ಸಮನ್ವಯಕಾರರಾದ ವರ್ಷಿಣಿ, ನಾಗರಾಜ್, ರಕ್ಷಾ, ಆದರ್ಶ್, ಸಂಜನಾ , ಮೇಘ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು