ಇತ್ತೀಚಿನ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೊ ಹಂಚಿಕೆ: ಕಳಸ ಸಂಸೆಯ ಯುವಕನ ಬಂಧನ
11/05/2024, 11:06
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಹಂಚಿಕೊಂಡ ಯುವಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳಸ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬ ಯುವಕನ ವಿರುದ್ಧ ಎಫ್.ಐ.ಆರ್. ದಾಖಲು ಮಾಡಲಾಗಿದೆ. ಈತ ಇನ್ಟಾಗ್ರಾಮ್, ಫೆಸ್ಬುಕ್ ಖಾತೆಯಲ್ಲಿ ಅಶ್ಲೀಲ ವಿಡಿಯೋ, ಫೋಟೋ ಹಂಚಿಕೊಂಡಿದ್ದ ಆರೋಪದ ಮೇಲೆ ಕೇಸು ದಾಖಲಿಸಲಾಗಿದೆ.
ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವಂತಹ ಪದಬಳಕೆ ಮಾಡಿದ್ದ ಎನ್ನಲಾಗಿದೆ.
ಆರೋಪಿಯನ್ನ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.














