2:37 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

11/05/2024, 18:08

ಮೋಹನ್ ನಂಜನಗೂಡು‌ ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು
ಕಣ್ಣೀರಿಟ್ಟಿದ್ದಾರೆ.


ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಮತ್ತು ಶ್ರೀನಿವಾಸ್ ಪ್ರಸಾದ್ ಅಭಿಮಾನಿಗಳ ಬಳಗ ಹಾಗೂ ಗ್ರಾಮಸ್ಥರು ಆಯೋಜನೆ ಮಾಡಲಾಗಿದ್ದ ಶ್ರೀನಿವಾಸ ಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮೌನಾಚರಣೆ ಮಾಡಲಾಯಿತು.
ಮಾಜಿ ತಾ.ಪಂ ಸದಸ್ಯ ಬಿ.ಎಸ್ ರಾಮು ಮಾತನಾಡಿ, ಶ್ರೀನಿವಾಸ್ ಪ್ರಸಾದ್ ರವರ ಕಳೆದುಕೊಂಡು ನಾವು ತಬ್ಬಲಿ ಮಕ್ಕಳಾಗಿದ್ದೇವೆ. ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಬದನವಾಳು ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಪ್ರಸಾದ್ ರವರು ಬೆನ್ನೆಲುಬಾಗಿ ನಿಂತು ನಮಗೆ ನ್ಯಾಯವನ್ನು ನೀಡಿದರು. ಬದನವಾಳಿಗೂ ಶ್ರೀನಿವಾಸ್ ಪ್ರಸಾದ್ ರವರಿಗೂ 40 ವರ್ಷಗಳ ಕಾಲ ನಂಟಿದೆ. ನಮ್ಮ ಮೈಸೂರು ಪ್ರಾಂತ್ಯದಲ್ಲಿ ದಲಿತ ನಾಯಕತ್ವ ಮರೆಯಾಗುತ್ತಿದೆ. ಹಾಗಾಗಿ ಬದನವಾಳು ಗ್ರಾಮದಲ್ಲಿ ಒಂದು ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ನುಡಿ ನಮನ ಕಾರ್ಯಕ್ರಮದಲ್ಲಿ ಗೀತಾ ಗಾಯನದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರುಕಣ್ಣೀರಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ತಾಪಂ ಅಧ್ಯಕ್ಷ ನಾಗೇಶ್ ರಾಜ್, ಸಾಹಿತಿ ಮಲ್ಕುಂಡಿ ಮಹದೇವಸ್ವಾಮಿ, ಶ್ರೀನಿವಾಸ್ ಪ್ರಸಾದ್ ರವರ ಸಹೋದರ ರಾಮಸ್ವಾಮಿ, ಪ್ರೊ‌. ಕುಮಾರಸ್ವಾಮಿ, ಕುಂಬ್ರಹಳ್ಳಿ ಸುಬ್ಬಣ್ಣ, ದೊರೆಸ್ವಾಮಿ, ಗ್ರಾಪಂ ಸದಸ್ಯರಾದ ಶಿವರಾಮ್, ಮಹದೇವ್, ಮುಖಂಡರಾದ ಸೋಮಣ್ಣ, ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು