ಇತ್ತೀಚಿನ ಸುದ್ದಿ
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ
14/05/2024, 21:40
ವಾರಣಾಸಿ(reporterkarnataka.com): ಲೋಕಸಭೆ ಚುನಾವಣೆ 2024: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನಾಲ್ವರು ಪ್ರಸ್ತಾವಕರು ಪ್ರಧಾನಿ ಮೋದಿಯವರ ಜೊತೆಗಿದ್ದರು.
ಪ್ರಧಾನಿ ಮೋದಿ ಎರಡು ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ.
ಅವರು 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದಿದ್ದಾರೆ.
ವಾರಾಣಸಿ ಕ್ಷೇತ್ರದಲ್ಲಿ ಅಂತಿಮ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ.