10:40 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ

15/05/2024, 13:12

ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿವಾಸಿ ಅಂಜಲಿ ಮೋಹನ ಅಂಬಿಗೇರ ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ಆರೋಲಿ ಯಲ್ಲಾಪುರ ಓಣಿಯ ಗಿರೀಶ ಸಾವಂತ ಎಂದು ಗುರುತಿಸಲಾಗಿದೆ.
ಗಿರೀಶ್ ಸಾಮಂತ ಅಂಜಲಿಯನ್ನು ಏಕಮುಖ ಪ್ರೀತಿಸುತ್ತಿದ್ದ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಕ್ರೋಧಗೊಂಡ ಗೌರೀಶ ಬುಧವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಂಜಲಿಯ ಮನೆಗೆ ಹೋಗಿ ಬಾಗಿಲು ತಟ್ಟಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೃತ್ಯ ಎಸಗಿದ ಗಿರೀಶ ಪರಾರಿಯಾಗಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು