ಇತ್ತೀಚಿನ ಸುದ್ದಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮೇ 18ರಂದು ಕುರುಬ ಸಮುದಾಯದ ಸಭೆ
16/05/2024, 19:59

ಮೈಸೂರು(reporterkarnataka.com): ಮುಂದಿನ ತಿಂಗಳು ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುವ ಸಲುವಾಗಿ ಕುರುಬ ಸಮುದಾಯದ ಶಿಕ್ಷಕರ ಮತ್ತು ಅಧ್ಯಾಪಕರ ಬೃಹತ್ ಸಭೆ ಮೇ 18ರಂದು ಬೆಳಿಗ್ಗೆ 11.00 ಗಂಟೆಗೆ ಮೈಸೂರು ನಗರ ಮೆಟ್ರೋಫೋಲ್ ಹಿಂಭಾಗದ ಹೋಟೆಲ್ ಗುರು ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ಮೈಸೂರು, ಮಂಡ್ಯ , ಹಾಸನ, ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕುಗಳ ಕುರುಬರ ಸಂಘದ ಅಧ್ಯಕ್ಷರು, ನಾಲ್ಕೂ ಜಿಲ್ಲೆಗಳ ಪ್ರದೇಶ ಕುರುಬರ ಸಂಘದ ನಿರ್ದೇಶಕರು , ಸಂಘ ಸಂಸ್ಥೆಗಳ ಮುಖಂಡರು, ಸಮುದಾಯದ ಹಿತಚಿಂತಕರು , ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು ಹಾಗೂ ನಾಲ್ಕೂ ಜಿಲ್ಲೆಗಳ ಅಧ್ಯಾಪಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸಹಕಾರ ನೀಡಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ
ನಿಕಟಪೂರ್ವ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ.