ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಗ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆ
17/05/2024, 10:43
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ.
ರಾತ್ರಿಯಿಡೀ ಸುರಿದ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕಾದ ಬಣಾಲೆಯಂತಾಗಿದ್ದ ಭೂಮಿ ತಂಪಾಗಿದೆ.
ಚಿಕ್ಕಮಗಳೂರು ತಾಲೂಕಿನ ಕಳಸಾಪುರ, ಬೆಳವಾಡಿ, ಕೆ.ಬಿ. ಹಾಳ್, ಈಶ್ವರಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಹಾಗೆ
ಗುಡ್ಡಗಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.




ತುಂಗ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ಕುದುರೆಮುಖ, ಕೆರೆಕಟ್ಟೆ ಪರ್ವತ ಶ್ರೇಣಿಯಲ್ಲೂ ಧಾರಾಕಾರ ಮಳೆ ಸುರಿದಿದೆ.
ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಒಳಹರಿವಿನಲ್ಲಿ ಏರಿಕೆಯಾಗಿದೆ.














