8:31 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು