10:39 AM Wednesday8 - January 2025
ಬ್ರೇಕಿಂಗ್ ನ್ಯೂಸ್
ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ

19/05/2024, 00:00

ಮಂಗಳೂರು(reporterkarnataka.com): ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಕ್ಷೇತ್ರಗಳ 2024 ರ ಚುನಾವಣೆಗೆ ಮೇ 9ರಿಂದ ಮೇ 16ರ ವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ 17 ರಂದು ನಡೆಸಲಾಯಿತು.
*ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕೃತವಾಗಿರುವ ವಿವರ:* ನೈಋತ್ಯ ಪದವೀಧರರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳೂ ಅಂಗೀಕೃತವಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 9 ನಾಮಪತ್ರಗಳು ಅಂಗೀಕೃತಗೊಂಡಿದೆ. ಪಕ್ಷೇತರ ಅಭ್ಯರ್ಥಿ ಎಂ. ಸತೀಶ್ ಕಾರಂತ್ ಅವರ ನಾಮಪತ್ರದಲ್ಲಿ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ನಾಮಪತ್ರ ತಿರಸ್ಕೃತವಾಗಿದೆ.
ಮೇ 20 ರವರೆಗೆ ನಾಮಪತ್ರಗ ಹಿಂಪಡೆಯಲು ಅವಕಾಶವಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ. ಜಿ.ಸಿ. ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು